ಬೆಸ್ಕಾಂ ವ್ಯಾಪ್ತಿಯಲ್ಲಿ ಗೃಹಜ್ಯೋತಿ ಸಮೀಕ್ಷೆ ವೇಳೆ ಮನೆಗೆ ಬೀಗ ಹಾಕಿದ್ದ ಅಥವಾ ಇತರೆ ಕಾರಣಗಳಿಂದ ಭಾಗವಹಿಸಲು ಸಾಧ್ಯವಾಗದ ಗ್ರಾಹಕರಿಗೆ ದಾಖಲೆಗಳನ್ನು ಸಲ್ಲಿಸಲು ರಾಜ್ಯ ಸರ್ಕಾರ ಅಕ್ಟೋಬರ್ 31ರವರೆಗೆ ಅವಕಾಶ ಕಲ್ಪಿಸಿದೆ. ಸಮೀಕ್ಷೆಯಿಂದ ಹೊರಗುಳಿದಿರುವ ಸುಮಾರು 16.37 ಲಕ್ಷ ಗ್ರಾಹಕರು ಹತ್ತಿರದ ಬೆಸ್ಕಾಂ ಉಪವಿಭಾಗ ಕಚೇರಿಗೆ ಖುದ್ದಾಗಿ ತೆರಳಿ ಅಗತ್ಯ ದಾಖಲೆಗಳನ್ನು ನೀಡಿ ಪರಿಶೀಲಿಸಿಕೊಳ್ಳುವಂತೆ ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ದಾಖಲೆಗಳ ಪರಿಶೀಲನೆಗೆ ಇದು ಕೊನೆಯ ಅವಕಾಶವಾಗಿದ್ದು, ತಪ್ಪಿದಲ್ಲಿ ಸೌಲಭ್ಯ ಪಡೆಯಲು ತೊಂದರೆಯಾಗಲಿದೆ.