ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಫಲಾನುಭವಿಗಳಿಂದ ಹೊಸದಾಗಿ ಅರ್ಜಿ ಆಹ್ವಾನಿಸಲು ಸರ್ಕಾರ ಪ್ಲಾನ್ ಮಾಡಿದೆ ಎನ್ನಲಾಗಿದೆ. 1.24 ಕೋಟಿ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಫಲಾನುಭವಿಗಳಿಂದ ಹೊಸದಾಗಿ ಅರ್ಜಿ ಸ್ವೀಕರಿಸಲು ಸರ್ಕಾರ ಚಿಂತನೆ ನಡೆಸಿದೆ. ಯಾರು ಹೊಸದಾಗಿ ಅರ್ಜಿ ಸಲ್ಲಿಸುವುದಿಲ್ಲವೋ ಅಂತವರ ಗ್ಯಾರಂಟಿಗಳಿಗೆ ಕೋಕ್ ನೀಡಲು ಸರ್ಕಾರ ಮುಂದಾಗಿದೆ ಎನ್ನಲಾಗಿದ್ದು, ಮೂರನೇ ವ್ಯಕ್ತಿಗಳ ಹೆಸರಲ್ಲಿರೋ ಲಕ್ಷಾಂತರ ಮೊಬೈಲ್ ಸಂಖ್ಯೆಗಳು ಲಿಂಕ್ ಆಗಿರುವುದರಿಂದ ದೊಡ್ಡ ಸಂಖ್ಯೆಯಲ್ಲಿ ಫಲಾನುಭವಿಗಳಿಗೆ ಕೋಕ್ ನೀಡಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬ ಮಾಹಿತಿ ಇದೆ.