ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರದಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಭೀಕರ ಘಟನೆ ನಡೆದಿದೆ. ಭೀಮಾತೀರದ ಜಮೀನು ವಿವಾದದಲ್ಲಿ ಆರು ಮಂದಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.