ಪತ್ನಿ ಚೆನ್ನಮ್ಮ ನಿಧನದ ಬಳಿಕ ಮೊಟ್ಟ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಪ್ರತಿಕ್ರಿಯೆ ನೀಡಿದ್ದು, ಭಾವುಕ ಸಂದೇಶವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. 72 ವರ್ಷಗಳ ಸುದೀರ್ಘಕಾಲ ತಮ್ಮೊಂದಿಗೆ ಹೆಜ್ಜೆಗೆ ಹೆಜ್ಜೆ ಇರಿಸಿ ನಡೆದಿದ್ದ ಸಹಧರ್ಮಿಣಿ ಚೆನ್ನಮ್ಮ ಅವರು 2026ರ ಜುಲೈ 18ರಂದು ಶನಿವಾರ ಶಿವೈಕ್ಯರಾದರು. ಮನೆಯ ನಂದಾದೀಪ ನಂದಿಹೋದ ಕಷ್ಟಕರ ಸಂದರ್ಭದಲ್ಲಿ ನಮ್ಮ ದುಃಖದಲ್ಲಿ ಭಾಗಿಯಾಗಿ ಸಾಂತ್ವನದ ಚೈತನ್ಯಧಾರೆ ಎರೆದ ಸಮಸ್ತರಿಗೂ ಕೈ ಜೋಡಿಸಿ ಕೃತಜ್ಞತೆಗಳನ್ನು ಸಮರ್ಪಿಸುತ್ತೇನೆ ಎಂದವರು ತಿಳಿಸಿದ್ದಾರೆ.