ಜ. 24 ರಂದು ನಡೆಯಲಿರುವ ಜೆಡಿಎಸ್ ಬೃಹತ್ ಸಮಾವೇಶದ ಸಿದ್ಧತೆಗಳನ್ನು ಪರಿಶೀಲಿಸಲು ಹೆಚ್.ಡಿ. ಕುಮಾರಸ್ವಾಮಿ ಹಾನಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ, ಅವರ ಸಹೋದರ ಹೆಚ್.ಡಿ. ರೇವಣ್ಣ ಅವರು ವಾಸ್ತು ಪ್ರಕಾರ ದಕ್ಷಿಣ ದಿಕ್ಕಿನಿಂದ ಕುಮಾರಸ್ವಾಮಿಯವರನ್ನು ಕಾರಿನಿಂದ ಕೆಳಗಿಳಿಸಿದ ಪ್ರಸಂಗ ನಡೆದಿದೆ. ಇನ್ನು ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದು, ಜನಸಂದಣಿಯನ್ನು ನಿಯಂತ್ರಿಸಲು ಕಾರ್ಯಕರ್ತರು ಮತ್ತು ಭದ್ರತಾ ಸಿಬ್ಬಂದಿ ಹರಸಾಹಸ ಪಟ್ಟರು.