ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಮಣ್ಣಲ್ಲಿ ಮಣ್ಣಾಗಿದ್ದಾರೆ. ಸಕಲ ಸರ್ಕಾರಿ ಗೌರವದೊಂದಿಗೆ ಚೆನ್ನಮ್ಮನವರ ಅಂತ್ಯಕ್ರಿಯೆ ನಡೆದಿದ್ದು, ಅಂತಿಮ ವಿಧಿವಿಧಾನವನ್ನು ಕಿರಿಯ ಮಗ ಹೆಚ್.ಡಿ.ರಮೇಶ್ ಪೂರೈಸಿದ್ದಾರೆ. ಉಸಿರಾಟದ ತೊಂದರೆಯಿಂದ ಜುಲೈ 15ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಚೆನ್ನಮ್ಮ, ಜುಲೈ 18ರಂದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದರು. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನ ಜಮೀನಿನಲ್ಲಿ ಚೆನ್ನಮ್ಮ ಅಂತ್ಯಕ್ರಿಯೆ ನಡೆದಿದೆ.