ಬಿಸಿಲ ಬೇಗೆಯಿಂದ ಕಾದಿದ್ದ ಗದಗ ಜಿಲ್ಲೆಗೆ ವರುಣದೇವ ತಂಪೆರೆದಿದ್ದಾನೆ. ಹಲವೆಡೆ ಗುಡುಗು, ಸಿಡಿಲು ಸಹಿತ ಭಾರಿ ಆಲಿಕಲ್ಲು ಮಳೆಯಾಗಿದೆ. ಮುಂಡರಗಿ ತಾಲೂಕಿನ ಬಿಡನಾಳ ಗ್ರಾಮದಲ್ಲಿ ಸಿಡಿಲಿಗೆ ತೆಂಗಿನಮರ ಹೊತ್ತಿ ಉರಿದಿದ್ದು, ಲಕ್ಷ್ಮೇಶ್ವರ ಪಟ್ಟಣದಲ್ಲಿ ಒಂದು ಗಂಟೆಗೂ ಹೆಚ್ಚು ಮಳೆ ಸುರಿದಿದೆ. ಅನಿರೀಕ್ಷಿತ ಮಳೆಯಿಂದ ಜನತೆ ಹಾಗೂ ಪ್ರಯಾಣಿಕರು ಪರದಾಡಿದ್ದಾರೆ. ಗದಗ ಜಿಲ್ಲೆಯ ಜನರಿಗೆ ಮಳೆಯಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.