ಚನ್ನಪಟ್ಟಣ ತಾಲೂಕಿನ ಹಾರೋಹಳ್ಳಿ ಗ್ರಾಮದಲ್ಲಿ ಕಳೆದ ವಾರದಿಂದ ಚಿರತೆ ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಸ್ಥಳೀಯರು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಚಿರತೆಯ ದೃಶ್ಯ ಸೆರೆಹಿಡಿದಿದ್ದಾರೆ. ಗ್ರಾಮಸ್ಥರು ಚಿರತೆಯಿಂದ ತಮ್ಮ ಸುರಕ್ಷತೆಗಾಗಿ ಅರಣ್ಯಾಧಿಕಾರಿಗಳಿಗೆ ತಕ್ಷಣವೇ ಅದನ್ನು ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ. ಚಿರತೆಯ ಉಪಟಳದಿಂದಾಗಿ ಜನರು ಭಯದಲ್ಲಿ ದಿನ ಕಳೆಯುತ್ತಿದ್ದಾರೆ.