ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದೇವಿಯ ಗರ್ಭಗುಡಿ ಬಾಗಿಲನ್ನು ಶಾಸ್ತ್ರೋಕ್ತವಾಗಿ ಇಂದು ಮಧ್ಯಾಹ್ನ 12.21ಕ್ಕೆ ತೆರಯಲಾಗಿದೆ. ಅರಸು ವಂಶಸ್ಥ ನಂಜರಾಜೇಅರಸ್ ಗೊನೆಯುಳ್ಳ ಬಾಳೆಗೊನೆ ಕಡಿದ ಬಳಿಕ ಗರ್ಭಗುಡಿ ಬಾಗಿಲು ತೆರೆಯಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸಂಸದ ಶ್ರೇಯಸ್ ಪಟೇಲ್ ಶಾಸಕರುಗಳಾದ ಎಚ್.ಪಿ.ಸ್ವರೂಪ್ಪ್ರಕಾಶ್, ಕೆ.ಎಂ.ಶಿವಲಿಂಗೇಗೌಡ, ಸಿಎನ್ ಬಾಲಕೃಷ್ಣ ಜಿಲ್ಲಾಧಿಕಾರಿ ಲತಾಕುಮಾರಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮದ್ ಸುಜೇತಾ ಸೇರಿದಂತೆ ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.