ಬೆಂಗಳೂರು ನಗರದ ಗೊಟ್ಟಿಗೆರೆಯಲ್ಲಿರುವ ಫ್ಯಾಮಿಲಿ ರೆಸ್ಟೋರೆಂಟ್ನಲ್ಲಿ ತಿಂಡಿ ತಿನ್ನುತ್ತಿದ್ದ 42 ವರ್ಷದ ಚನ್ನರಾಯಪಟ್ಟಣದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಸಂಭವಿಸಿದೆ. ಅಕ್ಟೋಬರ್ 30ರಂದು ಈ ಘಟನೆ ನಡೆದಿದ್ದು, ಇಡೀ ದೃಶ್ಯಾವಳಿಗಳು ರೆಸ್ಟೋರೆಂಟ್ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.