ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಮದುವೆಯಾಗಿ ಕೇವಲ 15 ದಿನಗಳಾಗಿದ್ದ ನವ ದಂಪತಿ ಕಾರ್ತಿಕ್ ಹೂಗಾರ ಮತ್ತು ಐಶ್ವರ್ಯಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದಂಪತಿ ದೇವರ ದರ್ಶನ ಮುಗಿಸಿ ಹಿಂದಿರುಗುವಾಗ ದುರಂತ ಸಂಭವಿಸಿದೆ.