ಕಾಂಗ್ರೆಸ್ ಶಾಸಕ ಹೆಚ್.ಸಿ.ಬಾಲಕೃಷ್ಣ ಬಿಜೆಪಿ ಸಂಸದರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೇಕೆದಾಟು ಯೋಜನೆಯಲ್ಲಿನ ವಿಳಂಬ, ಡಿಲಿಮಿಟೇಶನ್ ವಿಚಾರದಲ್ಲಿ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಮತ್ತು ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಿಸಿದಂತೆ ಬಿಜೆಪಿ ಎಂಪಿಗಳ ನಿಷ್ಕ್ರಿಯತೆಯನ್ನು ಬಾಲಕೃಷ್ಣ ಖಂಡಿಸಿದ್ದಾರೆ. ರಾಜ್ಯದ ಹಿತಾಸಕ್ತಿಗಿಂತ ಪಕ್ಷದ ಹೈಕಮಾಂಡ್ನ ಆದೇಶಗಳಿಗೆ ಮನ್ನಣೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.