ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು 94ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದು, ಜನ್ಮ ದಿನದ ಹಿನ್ನೆಲೆ ಜೆ.ಪಿ.ನಗರದಲ್ಲಿನ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಮತ್ತು ಪುತ್ರ ಹೆಚ್.ಡಿ. ಕುಮಾರಸ್ವಾಮಿ ಸೇರಿ ಹಲವು ಗಣ್ಯರು ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.