ಬಿಡದಿ ಟೌನ್ಶಿಪ್ ವಿರೋಧಿಸಿ ಜೆಡಿಎಸ್ ಪಾದಯಾತ್ರೆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಯಾರಿಂದಲೂ ತಮ್ಮನ್ನು, ಜೆಡಿಎಸ್ ಪಕ್ಷವನ್ನು ಅಥವಾ ಹೆಚ್.ಡಿ. ದೇವೇಗೌಡ ಅವರನ್ನು ಖರೀದಿಸಲು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಆ ಮೂಲಕ ಸಚಿವ ಹೆಚ್.ಸಿ. ಬಾಲಕೃಷ್ಣ ಅವರಿಗೆ ಹೆಚ್ಡಿಕೆ ಪರೋಕ್ಷವಾಗಿ ಕೌಂಟರ್ ಕೊಟ್ಟಿದ್ದಾರೆ.