ಕೆಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರವು ಜನರಿಂದ ಸಂಪನ್ಮೂಲಗಳನ್ನು ಕಿತ್ತುಕೊಂಡು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಮತ್ತು ಅಭಿವೃದ್ಧಿಯ ಪದವನ್ನೇ ಮರೆತಿದೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಉಪಚುನಾವಣೆ ಹಿನ್ನೆಲೆ ಈ ಹೇಳಿಕೆಗಳು ಮಹತ್ವ ಪಡೆದಿವೆ.