ರಾಜಧಾನಿ ಬೆಂಗಳೂರಿನ (Bengaluru) ಹಲವೆಡೆ ಸಂಜೆ ಧಾರಾಕಾರ ಮಳೆ(Rain)ಯಾಗಿದ್ದು, ನಗರದ ದಕ್ಷಿಣ ಭಾಗದಲ್ಲಿ ಭರ್ಜರಿ ವರ್ಷಧಾರೆಯಾಗಿದೆ. ಜಯನಗರ, ಪದ್ಮನಾಭನಗರ, ಜೆಪಿ ನಗರ, ಎಡೆಯೂರು, ಬಸವಗುಡಿ ಸೇರಿ ಹಲವೆಡೆ ವರುಣ ಅಬ್ಬರಿಸಿದ್ದು, ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ಸಾರ್ವಜನಿಕರು ಪರದಾಟ ನಡೆಸಿದ್ದಾರೆ. ಸುಮಾರು 20 ನಿಮಿಷಕ್ಕೂ ಹೆಚ್ಚು ಸಮಯ ಮಳೆಯಾಗಿದ್ದು, ವಾಹನಗಳ ಸಂಚಾರಕ್ಕೂ ಅಡಚಣೆ ಉಂಟಾಗಿದೆ.