ಮಹಾರಾಷ್ಟ್ರದ ಪಶ್ಚಿಮ ಘಟ್ಟ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನಿಪ್ಪಾಣಿ ತಾಲೂಕಿನ ಮೂರು ಸಂಪರ್ಕ ಸೇತುವೆಗಳು ಜಲಾವೃತಗೊಂಡಿವೆ. ದೂದಗಂಗಾ ಮತ್ತು ವೇದಗಂಗಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕಾರದಗಾ-ಬೋಜ್ ಸೇತುವೆ ಹಾಗೂ ಬಾರವಾಡ-ಕನ್ನೂರ ಮತ್ತು ಬೋಜವಾಡಿ-ಗಜವರವಾಡಿ ಸೇತುವೆಗಳು ಸಂಪೂರ್ಣ ಮುಳುಗಿವೆ, ಸಂಚಾರಕ್ಕೆ ಅಡಚಣೆ ಉಂಟಾಗಿದೆ.