ಗಣಿ ಜಿಲ್ಲೆ ಬಳ್ಳಾರಿಯಲ್ಲಿ ನಿರಂತರ ಮಳೆಯಿಂದ ಮಲೆನಾಡಿನ ವಾತಾವರಣ ನಿರ್ಮಾಣವಾಗಿದೆ. ಬೆಳಗ್ಗೆಯಿಂದಲೇ ಜಿಲ್ಲೆಯಾದ್ಯಂತ ಜಿಟಿಜಿಟಿ ಮಳೆಯಾಗುತ್ತಿದ್ದು, ವಾಹನ ಸವಾರರು ಹೈರಾಣಾಗಿದ್ದಾರೆ. ಮಳೆಯ ನಡುವೆಯೇ ಜನರು ತಮ್ಮ ಕೆಲಸಗಳಿಗೆ ತೆರಳುತ್ತಿದ್ದಾರೆ. ಮತ್ತೊಂದೆಡೆ, ಕಟಾವಿಗೆ ಬಂದಿದ್ದ ಭತ್ತದ ಬೆಳೆ ಮಳೆಯಿಂದ ಹಾನಿಯಾಗುವ ಆತಂಕ ರೈತರನ್ನು ಕಾಡುತ್ತಿದೆ. ನಿರಂತರ ಮಳೆಗೆ ಭತ್ತದ ಬೆಳೆ ನೆಲಕ್ಕುರುಳುವ ಭೀತಿ ಎದುರಾಗಿದ್ದು, ಅನ್ನದಾತರು ಕಂಗಾಲಾಗಿದ್ದಾರೆ.