ಇಂದು ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗಿದ್ದು, ಮಂಗಳೂರಿನಲ್ಲೂ ಬೆಳ್ಳಂಬೆಳಗ್ಗೆ ಭಾರೀ ಮಳೆಯಾಗಿದೆ. ಕದ್ರಿ ಸೇರಿದಂತೆ ಮಂಗಳೂರಿನ ಹಲವೆಡೆ ವರುಣನಾರ್ಭಟ ಕಂಡುಬಂದಿದೆ. ಇನ್ನು ಬೆಂಗಳೂರಿನಲ್ಲೂ ಮೆಜೆಸ್ಟಿಕ್ ಮತ್ತು ರಿಚ್ಮಂಡ್ ಟೌನ್ ಸೇರಿದಂತೆ ಹಲವೆಡೆ ಜಿಟಿ ಜಿಟಿ ಮಳೆಯಾಗಿದೆ. ಇನ್ನೂ ಮೂರು ದಿನ ಇದೇ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.