ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಹಲವೆಡೆ ಗುಡುಗು ಮಿಂಚಿನ ಸಹಿತ ಭಾರಿ ಮಳೆಯಾಗಿದೆ. ಧಾರಾಕಾರ ಮಳೆ ಹಿನ್ನೆಲೆ ರಸ್ತೆಗಳಲ್ಲಿಯೇ ಹಳ್ಳದ ರೀತಿ ನೀರು ಹರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ತಾಲೂಕಿನ ರಾಮನಾಳ, ಹಾರೋಗೇರಿ ಸೇರಿದಂತೆ ವಿವಿಧ ಗ್ರಾಮದಲ್ಲಿ ವರುಣ ಅಬ್ಬರಿಸಿದ್ದು, ಸುಮಾರು ಅರ್ಧ ಗಂಟೆಗೂ ಹೆಚ್ಚು ಸಮಯ ಭಾರಿ ಮಳೆ ಸುರಿದಿದೆ.