ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರಿ ಬಿರುಗಾಳಿ, ಸಿಡಿಲು ಸಹಿತ ಧಾರಾಕಾರ ಮಳೆಯಾಗಿದೆ. ಚಿಕ್ಕಮಗಳೂರು ನಗರ, ಹಿರೇಮಗಳೂರು, ಆಲ್ದೂರು, ಬಾಳೆಹೊನ್ನೂರು, ಮೂಡಿಗೆರೆ, ಎನ್.ಆರ್. ಪುರ, ಸೇರಿದಂತೆ ಹಲವೆಡೆ ಭಾರಿ ಮಳೆಯಾಗಿದ್ದು ಬಿಸಿಲ ತಾಪಕ್ಕೆ ಕಂಗೆಟ್ಟಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ. ಕಳೆದೊಂದು ವಾರದಿಂದ ನಿರಂತರ ಏರಿಕೆ ಕಂಡಿದ್ದ ಬಿಸಿಲಿನ ತಾಪಮಾನದ ನಡುವೆ ಮಳೆಯ ಸಿಂಚನಕ್ಕೆ ಕಾಫಿನಾಡಿಗರು ಫುಲ್ ಖುಷ್ ಆಗಿದ್ದಾರೆ.