ಬೆಳಗಾವಿಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ವಾಸ್ತವ್ಯ ಹೂಡಿದ್ದ ಸಂದರ್ಭದಲ್ಲಿ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುಟುಂಬ ಭೇಟಿ ಮಾಡಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರ ತಾಯಿ ಗಿರಿಜಾ ಹಟ್ಟಿಹೊಳಿ, ಸಹೋದರಿಯರು ಟಿಫನ್ ಸಮೇತ ಆಗಮಿಸಿ, ಸಿಎಂ ಜೊತೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಈಗಾಗಲೇ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ ಕೂಡ ಸ್ಥಳದಲ್ಲಿದ್ದರು.