ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ಸಮೀಪದ ಹೆಬ್ಬೆ ಜಲಪಾತವು ಭಾರೀ ಮಳೆಯಿಂದಾಗಿ ಮೈದುಂಬಿ ಹರಿಯುತ್ತಿದೆ. ಪರ್ವತ ಶ್ರೇಣಿಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮವಾಗಿ, ಕಲ್ಲುಬಂಡೆಗಳ ಮೇಲಿಂದ ಹಾಲ್ನೊರೆಯಂತೆ ಭೋರ್ಗರೆಯುತ್ತಿರುವ ಹೆಬ್ಬೆ ಜಲಪಾತದ ನೋಟವು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಮಳೆಗಾಲದಲ್ಲಿ ಈ ಜಲಪಾತಕ್ಕೆ ವಿಶೇಷ ಮೆರುಗು ಬಂದಿದೆ.