ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದ ಕಿಲ್ಲಾಗಲ್ಲಿಯಲ್ಲಿ 50 ಅಡಿ ಆಳದ ಪಾಳು ಬಾವಿಗೆ ಬಿದ್ದಿದ್ದ ಬೆಕ್ಕನ್ನು ಅಗ್ನಿಶಾಮಕ ಸಿಬ್ಬಂದಿಗಳು ಯಶಸ್ವಿಯಾಗಿ ರಕ್ಷಿಸಿದ್ದಾರೆ. ಸ್ಥಳೀಯರ ಮಾಹಿತಿಯ ಮೇರೆಗೆ ಘಟನಾ ಸ್ಥಳಕ್ಕೆ ಧಾವಿಸಿದ ಸಿಬ್ಬಂದಿಗಳು ಹಗ್ಗದ ಸಹಾಯದಿಂದ ಬೆಕ್ಕನ್ನು ಸುರಕ್ಷಿತವಾಗಿ ಹೊರತರಲು ಶ್ರಮಿಸಿದರು. ಈ ಮಾನವೀಯ ಕಾರ್ಯಾಚರಣೆಗೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.