ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಮೇಲ್ಪಾಲ್ ಗ್ರಾಮದಲ್ಲಿ ರಸ್ತೆಯಲ್ಲಿನ ಗುಂಡಿಗಳನ್ನ ಕಾಂಕ್ರೀಟ್ ಹಾಕಿ ಮುಚ್ಚಿ ಪ್ರೌಢ ಶಾಲೆ ಮಕ್ಕಳು ಗಮನ ಸೆಳೆದಿದ್ದಾರೆ. ಕರ್ಕೇಶ್ವರ ಗ್ರಾಪಂ ವ್ಯಾಪ್ತಿಯ ಮೇಲ್ಪಾಲ್ ರಸ್ತೆಯಲ್ಲಿ ನಿರ್ಮಾNವಾಗಿದ್ದ ಗುಂಡಿಗಳಿಂದಾಗಿ ಸಂಚಾರಕ್ಕೆ ಸಮಸ್ಯೆಯಾಗಿತ್ತು. ಇದನ್ನು ಮನಗಂಡ ಮಕ್ಕಳು ಸಿಮೆಂಟ್, ಮರಳು ಹಾಗೂ ಜಲ್ಲಿ ತಂದು ಗುಂಡಿ ಮುಚ್ಚಿದ್ದಾರೆ. ವಿದ್ಯಾರ್ಥಿಗಳ ಕೆಲಸಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.