ಕಾವೇರಿ ಜಲನಯನ ಪ್ರದೇಶದಲ್ಲಿ ಸತತ ಮಳೆ ಹಿನ್ನಲೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನಲ್ಲಿ ಭರಚುಕ್ಕಿ ಹಾಗೂ ಹೊಗೇನಕಲ್ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. ಕಾವೇರಿ ನದಿಯ ಹರಿವಿನ ಹಚ್ಚ ಹಸಿರಿನ ಕಾಡ ಸೌಂದರ್ಯದಲ್ಲಿ ಬಂಡೆಗಳ ನಡುವೆ ಹಾಲಿನ ನೊರೆಯಂತೆ ಜಲಪಾತ ಧುಮ್ಮಿಕ್ಕಿ ಹರಿಯುವುದನ್ನು ನೋಡಲು ಪ್ರವಾಸಿಗರು ಮುಗಿಬೀಳುತ್ತಿದ್ದಾರೆ.