ಮಧ್ಯರಾತ್ರಿ ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ದೇವನಹಳ್ಳಿ ಹೊರವಲಯದ ರಾಣಿ ಕ್ರಾಸ್ ಬಳಿ ನಡೆದಿದೆ. ಹೈವೆಯಿಂದ ಸರ್ವೀಸ್ ರಸ್ತೆಗೆ ಬರುತ್ತಿದ್ದ ಟಿಟಿ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದಿದ್ದು, ಜಯಮ್ಮ(60), ಯಶೋದಮ್ಮ(60), ಗಂಗಾ(38) ಮೃತಪಟ್ಟಿದ್ರೆ, ಚಾಲಕ ಸೇರಿ 8 ಮಂದಿಗೆ ಗಾಯಗಳಾಗಿವೆ. ತುಮಕೂರು ಜಿಲ್ಲೆ ತಿಪಟೂರಿನ ಸ್ತ್ರೀಶಕ್ತಿ ಸಂಘದ ಮಹಿಳೆಯರು ಕಾಶಿ, ಅಯೋಧ್ಯೆ ಪ್ರವಾಸಕ್ಕೆ ತೆರಳುತ್ತಿದ್ದಾಗ ಅಪಘಾತ ನಡೆದಿದೆ.