ಚಿಕ್ಕಮಗಳೂರಿನ ಕೋಟೆ ಬಡಾವಣೆಯಲ್ಲಿ ವೇಗವಾಗಿ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಆಕ್ಸಲ್ ಕಟ್ ಆಗಿ ಬಸ್ ನಾಲ್ಕು ಅಡಿ ಎತ್ತರಕ್ಕೆ ನೆಗೆದ ಭಯಾನಕ ಘಟನೆ ನಡೆದಿದೆ. ಮೇಲಕ್ಕೆ ಹಾರಿದ ಬಸ್, ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ತಿರುಗಿ ನಿಂತಿದೆ. ಚಾಲಕನ ಸಮಯ ಪ್ರಜ್ಞೆಯಿಂದಾಗಿ ಬಸ್ ನಿಯಂತ್ರಣಕ್ಕೆ ಬಂದಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.