ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಪಿಲ್ಲಗುಂಪೆ ಕೈಗಾರಿಕಾ ಪ್ರದೇಶದಲ್ಲಿ ಮುಂಜಾನೆ ಆಕಸ್ಮಿಕವಾಗಿ ಪ್ಲಾಸ್ಟಿಕ್ ಗೋಡೌನ್ ಹೊತ್ತಿ ಉರಿದಿದೆ. ಬೆಳಗಿನ ಜಾವ 4 ಗಂಟೆಗೆ ಕಾಣಿಸಿಕೊಂಡ ಬೆಂಕಿಯನ್ನು ನಂದಿಸಲು ನಾಲ್ಕು ಅಗ್ನಿಶಾಮಕ ವಾಹನಗಳು ನಾಲ್ಕು ಗಂಟೆಗೂ ಹೆಚ್ಚು ಕಾಲ ಹರಸಾಹಸ ಪಟ್ಟವು. ಪ್ಲಾಸ್ಟಿಕ್ ಹೆಚ್ಚು ಇದ್ದ ಕಾರಣ ಅಗ್ನಿ ಅನಾಹುತ ತೀವ್ರವಾಗಿತ್ತು.