ಸಾಗರ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟಿಪ್ಪರ್ ಲಾರಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ, ಹಾಸ್ಟೆಲ್ ವಾರ್ಡನ್ ಆಗಿದ್ದ ಯುವತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವರ ತಂದೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ನೆಲ್ಲಿಬೀಡು, ನಿಟ್ಟೂರು, ಮತ್ತು ತೂಮರಿ ನಡುವೆ ಹಾದುಹೋಗುವ ಎನ್ಎಚ್ 369 ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.