ದ್ರಾಕ್ಷಿ ಮತ್ತು ಪೇರಳೆ (Pear) ಹಣ್ಣಿನ ಜ್ಯೂಸ್ ಒಂದು ಪೌಷ್ಟಿಕ ಮತ್ತು ರುಚಿಕರವಾದ ಪಾನೀಯವಾಗಿದೆ. ಇವೆರಡನ್ನೂ ಸೇರಿಸಿ ಜ್ಯೂಸ್ ಮಾಡಿ ಕುಡಿಯುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು. ಈ ಜ್ಯೂಸ್ನಲ್ಲಿ ಪೊಟ್ಯಾಸಿಯಮ್ ಮತ್ತು ವಿಟಮಿನ್ ಕೆ ಹೆಚ್ಚಿನ ಪ್ರಮಾಣದಲ್ಲಿದ್ದು, ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ದ್ರಾಕ್ಷಿಯ ಸಿಪ್ಪೆಯಲ್ಲಿರುವ ಆಂಟಿಆಕ್ಸಿಡೆಂಟ್ಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ಬೇಸಿಗೆಯಲ್ಲಿ ದೇಹವನ್ನು ತಂಪಾಗಿರಿಸಲು ಇದು ಸಹಕಾರಿಯಾಗಿದೆ. ಹಾಗಿದ್ರೆ ಇನ್ನೇಕೆ ತಡ ಒಮ್ಮೆ ಟ್ರೈ ಮಾಡಿ ನೋಡಿ.