ಹುಬ್ಬಳ್ಳಿಯ ಹಳೇ ಸಿಎಆರ್ ಮೈದಾನದಲ್ಲಿ ನಡೆದ ರೌಡಿ ಪರೇಡ್ನಲ್ಲಿ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ರೌಡಿಶೀಟರ್ಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಅಪರಾಧ ಕೃತ್ಯಗಳನ್ನು ಮುಂದುವರಿಸಿದವರಿಗೆ ಗೂಂಡಾ ಕಾಯ್ದೆ ಅಡಿ ಕ್ರಮ ಜರುಗಿಸುವುದಾಗಿ ತಿಳಿಸಿದರು. 20 ವರ್ಷದ ರೌಡಿಶೀಟರ್ ಒಬ್ಬನನ್ನು ತರಾಟೆಗೆ ತೆಗೆದುಕೊಂಡ ಶಶಿಕುಮಾರ್, ಆತನ ವೇಷಭೂಷಣ ಮತ್ತು ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.