ಹುಬ್ಬಳ್ಳಿಯಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ತೀವ್ರ ಅಭಾವದಿಂದಾಗಿ, ಅನೇಕ ಹೋಟೆಲ್ ಮಾಲೀಕರು ತಮ್ಮ ವ್ಯವಹಾರವನ್ನು ಮುಂದುವರಿಸಲು ಕಟ್ಟಿಗೆ ಒಲೆಗಳ ಮೊರೆ ಹೋಗುತ್ತಿದ್ದಾರೆ. ಇದರಿಂದಾಗಿ, ಈ ಹಿಂದೆ ಹೆಚ್ಚು ಬೇಡಿಕೆ ಇಲ್ಲದಿದ್ದ ಕಟ್ಟಿಗೆ ಒಲೆಗಳಿಗೆ ಇದೀಗ ನಗರದಲ್ಲಿ ಅಪಾರ ಬೇಡಿಕೆ ಸೃಷ್ಟಿಯಾಗಿದೆ.