ಹುಬ್ಬಳ್ಳಿಯ ಗಾಮನಗಟ್ಟಿಯ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಮನೆ ಮಾಡಿದೆ. ಕಳೆದ ನಾಲ್ಕೈದು ದಿನಗಳಿಂದ ಚಿರತೆ ಪ್ರತ್ಯಕ್ಷವಾಗುತ್ತಿದ್ದು, ಸ್ಥಳೀಯರ ಮೊಬೈಲ್ಗಳಲ್ಲಿ ಸೆರೆಯಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲಿಸಿ ಚಿರತೆಯ ಹೆಜ್ಜೆ ಗುರುತು ಪತ್ತೆ ಹಚ್ಚಿದ್ದಾರೆ. ಜನರ ಸುರಕ್ಷತೆಗಾಗಿ ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ತೀವ್ರ ಕಾರ್ಯಾಚರಣೆ ನಡೆಸುತ್ತಿದೆ.