ಹುಬ್ಬಳ್ಳಿಯಲ್ಲಿ ರೋಡ್ ರೋಮಿಯೋಗಳ ಹಾವಳಿ ಹೆಚ್ಚಿದ್ದು, ಮಹಿಳೆಯರ ಸುರಕ್ಷತೆಗೆ ಗಂಭೀರ ಬೆದರಿಕೆ ಒಡ್ಡಿದೆ. ಹಾಡಹಗಲೇ ರಸ್ತೆಯಲ್ಲಿ ಹೋಗುವ ಯುವತಿಯರ ಅಂಗಾಂಗಗಳನ್ನು ಮುಟ್ಟಿ ಪರಾರಿಯಾಗುವ ಪ್ರಕರಣಗಳು ಹೆಚ್ಚಾಗಿವೆ. ದೇಶಪಾಂಡೆ ನಗರದಲ್ಲಿ ಇಂತಹ ಘಟನೆ ನಡೆದಿದ್ದು, ಬೈಕ್ನಲ್ಲಿ ಬಂದ ಮೂವರು ಯುವಕರು ಕಿರುಕುಳ ನೀಡಿ ತಪ್ಪಿಸಿಕೊಂಡಿದ್ದಾರೆ. ಈ ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಜನ ಆಗ್ರಹಿಸಿದ್ದಾರೆ.