ಹುಣ್ಣಿಮೆ ಹಿನ್ನೆಲೆ ಕೊಪ್ಪಳ ತಾಲೂಕಿನ ಐತಿಹಾಸಿಕ ಹುಲಿಗೆಮ್ಮ ದೇವಸ್ಥಾನಕ್ಕೆ ಭಕ್ತರ ದಂಡೇ ಹರಿದುಬಂದಿದೆ. ಭಕ್ತರು ಸರದಿ ಸಾಲಿನಲ್ಲಿ ನಿಂತು ಅಮ್ಮನ ದರ್ಶನ ಪಡೆಯುತ್ತಿದ್ದಾರೆ. ರಾಜ್ಯ, ಹೊರ ರಾಜ್ಯಗಳಿಂದಲೂ ಹುಲಿಗೆಮ್ಮ ದೇವಸ್ಥಾನಕ್ಕೆ ಭಕ್ತರು ಆಗಮಿಸಿದ್ದಾರೆ.