ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಲ್ಲಿ ಅಡ್ಡಮತದಾನ ನಡೆದ ವಿಚಾರವಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಇದನ್ನು ಗಂಭೀರವಾಗಿ ಪರಿಗಣಿಸುತ್ತೇವೆ ಎಂದರು. ಇದರ ಹಿಂದೆ ಒಳಸಂಚಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಯಾವುದಕ್ಕೂ ಹೆದರಿ ಓಡಿಹೋಗುವವ ನಾನಲ್ಲ, ಯಡಿಯೂರಪ್ಪರ ಮಗ ಎಂದು ಖಡಕ್ ಪ್ರತಿಕ್ರಿಯೆ ನೀಡಿದರು.