ಬೆಂಗಳೂರಿನ ಬೀದಿ ಬದಿ ವ್ಯಾಪಾರಿಗಳಿಗೆ ಐಡಿ ಕಾರ್ಡ್ಗಳನ್ನು ವಿತರಿಸಲಾಗುತ್ತಿದ್ದು, ಉತ್ತರ ನಗರ ಪಾಲಿಕೆ ವ್ಯಾಪ್ತಿಯ 4445 ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಲಾಗ್ತಿದೆ. ಈಗಾಗಲೇ 20 ಮಂದಿಗೆ ಸಾಂಕೇತಿಕವಾಗಿ ಕಾರ್ಡ್ಗಳನ್ನು ವಿತರಿಸಲಾಗಿದ್ದು, ಉಳಿದವರಿಗೆ ಮುಂದಿನ ದಿನಗಳಲ್ಲಿ ಅವರ ವ್ಯಾಪಾರ ಸ್ಥಳದಲ್ಲೇ ವಿತರಿಸಲಾಗುವುದು. ವ್ಯಾಪಾರದ ಸಮಯದಲ್ಲಿ ಐಡಿ ಕಾರ್ಡ್ ಧರಿಸುವುದು ಕಡ್ಡಾಯ ಎಂದು ತಿಳಿಸಲಾಗಿದೆ.