ಬೀದರ್ ರಿಂಗ್ ರೋಡ್ನಲ್ಲಿ ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಅಕ್ರಮ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ಕಾರು ಮತ್ತು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ನೂರು ಟನ್ಗೂ ಅಧಿಕ ಅಕ್ಕಿ ಸಾಗಿಸುತ್ತಿದ್ದ ಲಾರಿ ಅಪಘಾತದಲ್ಲಿ ಚಾಲಕ ಹಾಗೂ ಕಾರಿನಲ್ಲಿದ್ದ ಆರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.