ನ್ಯೂಜಿಲೆಂಡ್ ವಿರುದ್ಧ ತನ್ನ ಕೊನೆಯ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ವಿಕೆಟ್ಕೀಪರ್ ಬ್ಯಾಟ್ಸ್ಮನ್ ಇಶಾನ್ ಕಿಶನ್ ಕೇವಲ 43 ಎಸೆತಗಳಲ್ಲಿ 6 ಬೌಂಡರಿ ಮತ್ತು 10 ಸಿಕ್ಸರ್ಗಳ ಸಹಿತ 103 ರನ್ಗಳ ಸಿಡಿಲಬ್ಬರದ ಶತಕ ಸಿಡಿಸಿದರು. ಈ ವೇಳೆ ಕಿಶನ್ ಸಿಕ್ಸರ್ ಸಿಡಿಸುವ ಮೂಲಕ ತಮ್ಮ ಚೊಚ್ಚಲ ಶತಕ ಪೂರೈಸಿದರು.