ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದ ಮೊದಲ ಓವರ್ನಲ್ಲಿ ರೀಜಾ ಹೆಂಡ್ರಿಕ್ಸ್ ವಿಕೆಟ್ ಉರುಳಿಸಿದ ಅರ್ಷದೀಪ್ ಸಿಂಗ್ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಪವರ್ಪ್ಲೇನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ ಎನಿಸಿಕೊಂಡಿದ್ದಾರೆ. ಅವರು ಟಿ20ಐಗಳಲ್ಲಿ ಪವರ್ಪ್ಲೇನಲ್ಲಿ 48 ವಿಕೆಟ್ಗಳನ್ನು ಕಬಳಿಸುವ ಮೂಲಕ ಭುವನೇಶ್ವರ್ ಕುಮಾರ್ ಅವರನ್ನು ಹಿಂದಿಕ್ಕಿದ್ದಾರೆ.