ರಾಂಚಿಯಲ್ಲಿ ವಿರಾಟ್ ಕೊಹ್ಲಿ ಶತಕ ಬಾರಿಸಿದ ಕೂಡಲೇ ಕ್ರೀಡಾಂಗಣದಲ್ಲಿದ್ದ ಅಭಿಮಾನಿಯೊಬ್ಬ ಭದ್ರತಾ ಸರಪಳಿಯನ್ನು ದಾಟಿ ವಿರಾಟ್ ಕೊಹ್ಲಿಯ ಕಾಲಿಗೆರಗಿದ್ದಾನೆ. ಕೂಡಲೇ ಭದ್ರತಾ ಸಿಬ್ಬಂದಿ ಸ್ಥಳಕ್ಕಾಗಮಿಸಿ ಆತನನ್ನು ಮೈದಾನದಿಂದ ಹೊರಕ್ಕೆ ಕರೆದುಕೊಂಡು ಹೋಗಿದ್ದಾರೆ.