ಜಮ್ಮು ಮತ್ತು ಕಾಶ್ಮೀರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಭೀಕರ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ, ರಜೌರಿ ಜಿಲ್ಲೆಯಲ್ಲಿ ನುಗ್ಗಿದ ಪ್ರವಾಹದಲ್ಲಿ ಸಿಲುಕಿದ್ದ 5 ಮಕ್ಕಳು ಮತ್ತು ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು 11 ಜನರನ್ನು ಭಾರತೀಯ ಸೇನೆಯು ಯಶಸ್ವಿಯಾಗಿ ರಕ್ಷಿಸಿದೆ. ರಕ್ಷಿಸಲ್ಪಟ್ಟ ಎಲ್ಲಾ 11 ನಾಗರಿಕರಿಗೆ ತಕ್ಷಣವೇ ಅಗತ್ಯ ಪ್ರಥಮ ಚಿಕಿತ್ಸೆ, ಆಹಾರ ಮತ್ತು ಆಶ್ರಯದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಪ್ರಸ್ತುತ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.