ಬೆಂಗಳೂರು ಸೇರಿ ದೇಶಾದ್ಯಂತ ಇಂಡಿಗೋ ವಿಮಾನಗಳ ವಿಳಂಬ ಮತ್ತು ರದ್ದತಿಯಿಂದಾಗಿ ಪ್ರಯಾಣಿಕರು ಕಳೆದ ಮೂರು ದಿನಗಳಿಂದ ತೀವ್ರ ಪರದಾಟ ನಡೆಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಇಂಡಿಗೋ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರು ತಮ್ಮ ಮಗಳಿಗೆ ಸ್ಯಾನಿಟರಿ ಪ್ಯಾಡ್ ಕೇಳಿದ ವಿಡಿಯೋ ವೈರಲ್ ಆಗಿದ್ದು, ಪರಿಸ್ಥಿತಿಯ ಗಂಭೀರತೆಯನ್ನು ತೋರಿಸಿದೆ.