ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವನಗುಲ್ ಗ್ರಾಮದಲ್ಲಿ ಕಾಡಾನೆ ಪ್ರತ್ಯಕ್ಷವಾಗಿದ್ದು, ಕಳೆದ 2 ದಿನಗಳಿಂದ ಗ್ರಾಮದಲ್ಲೇ ಬೀಡುಬಿಟ್ಟಿದೆ. ಕಾಡಾನೆ ಕಾಲಿಗೆ ಗಂಭೀರ ಗಾಯವಾಗಿದೆ ಎನ್ನಲಾಗಿದ್ದು, ಗ್ರಾಮಸ್ಥರ ಮೇಲೆ ದಾಳಿ ಮಾಡುವ ಸಾಧ್ಯತೆ ಇದೆ. ಹೀಗಾಗಿ ಕಾಡಾನೆ ಸೆರೆ ಹಿಡಿಯಬೇಕೆಂದು ಅರಣ್ಯ ಇಲಾಖೆಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಕಾಡಾನೆಯ ಓಡಾಟದ ವಿಡಿಯೋ ಇಲ್ಲಿದೆ.