ಜಗತ್ತಿನ ಪ್ರಮುಖ ತೈಲ ಉತ್ಪಾದಕ ರಾಷ್ಟ್ರಗಳಲ್ಲೊಂದಾದ ಕುವೈತ್ನಲ್ಲಿರುವ ಅಮೆರಿಕದ ಮಿಲಿಟರಿ ತಾಣ ಹಾಗೂ ತೈಲ ಘಟಕಗಳ ಮೇಲೆ ಇರಾನ್ ಪಡೆಗಳು ಭೀಕರ ದಾಳಿ ನಡೆಸಿವೆ. ಗಲ್ಫ್ ವಲಯದಲ್ಲಿರುವ ಅಮೆರಿಕದ ನೆಲೆಗಳೇ ಗುರಿಯಾಗಿ ಈ ದಾಳಿ ನಡೆದಿದೆ ಎಂದು ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ಸ್ ಕಾರ್ಪ್ಸ್ (IRGC) ಪ್ರಕಟಿಸಿದೆ. ಇರಾನ್ನ ರೆವಲ್ಯೂಷನರಿ ಗಾರ್ಡ್ಸ್ (IRGC) ನೀಡಿರುವ ಮಾಹಿತಿಯ ಪ್ರಕಾರ, ಕುವೈತ್ನಲ್ಲಿರುವ ಅಮೆರಿಕ ಸೇನೆಯ ಪ್ರಮುಖ ಮಿಲಿಟರಿ ಲಾಜಿಸ್ಟಿಕ್ಸ್ ಕೇಂದ್ರವನ್ನು ಗುರಿಯಾಗಿಸಿಕೊಂಡು ಇರಾನ್ ಪಡೆಗಳು ಸರಣಿ ಕ್ರೂಸ್ ಕ್ಷಿಪಣಿಗಳನ್ನು ಉಡಾಯಿಸಿವೆ.