ಚಿಕ್ಕಮಗಳೂರಿನ ಕಳಸ ತಾಲೂಕಿನ ತಲಗೋಡು ಗ್ರಾಮದಲ್ಲಿ ಕಾಡುಪ್ರಾಣಿಗಳ ಉಪಟಳ ಹೆಚ್ಚಾಗಿದೆ. ಕಾಡಾನೆ, ಕಾಡುಕೋಣಗಳ ಜೊತೆಗೆ ಇದೀಗ ಚಿರತೆಯೊಂದು ಜನವಸತಿ ಪ್ರದೇಶದಲ್ಲಿ ಸಂಚಾರ ನಡೆಸಿದ್ದು, ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಲೆನಾಡು ಭಾಗದಲ್ಲಿ ಹೆಚ್ಚುತ್ತಿರುವ ಈ ಕಾಡುಪ್ರಾಣಿಗಳ ಸಂಚಾರ ಸ್ಥಳೀಯರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಅರಣ್ಯ ವಲಯ ವ್ಯಾಪ್ತಿಯಲ್ಲಿ ಇಂತಹ ಘಟನೆಗಳು ಪುನರಾವರ್ತಿತವಾಗುತ್ತಿವೆ.