ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಣಗಾಲ್-ಕುಶಾಲನಗರ ಮುಖ್ಯ ರಸ್ತೆಯ ಡಾಂಬರೀಕರಣ ಕಳಪೆ ಗುಣಮಟ್ಟದಿಂದ ಕೂಡಿದೆ. ಕೋಟ್ಯಂತರ ವೆಚ್ಚದ ಈ ಕಾಮಗಾರಿಯಲ್ಲಿ ಹಾಕಿದ ಡಾಂಬರು ಕಾಲಿನಲ್ಲಿ ಕೆರೆದರೆ ಕಿತ್ತು ಬರುತ್ತಿದೆ. ಇದರಿಂದ ಆಕ್ರೋಶಗೊಂಡ ಕಣಗಾಲ್ ಗ್ರಾಮಸ್ಥರು ಕಳಪೆ ಕಾಮಗಾರಿ ವಿರೋಧಿಸಿ, ಅಧಿಕಾರಿಗಳು ಮತ್ತು ಗುತ್ತಿಗೆದಾರರ ಜವಾಬ್ದಾರಿಯ ಬಗ್ಗೆ ಪ್ರಶ್ನಿಸಿದ್ದಾರೆ.