ಕರ್ನಾಟಕ ವಿಧಾನಸಭೆಯ ಅಧಿವೇಶನದಲ್ಲಿ ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸದಸ್ಯರು ತೀವ್ರ ಪ್ರತಿಭಟನೆ ನಡೆಸಿದರು. ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ವಿರೋಧ ಪಕ್ಷದ ಸದಸ್ಯರು ಪಟ್ಟು ಹಿಡಿದು ಸದನದ ಬಾವಿಗಿಳಿದು ಧಿಕ್ಕಾರ ಕೂಗಿದರು. ಈ ಸಂದರ್ಭದಲ್ಲಿ ಅಬಕಾರಿ ಸಚಿವ ಶಿವಲಿಂಗೇಗೌಡರು ವಿರೋಧ ಪಕ್ಷದ ವರ್ತನೆಯನ್ನು ತೀವ್ರವಾಗಿ ಖಂಡಿಸಿದರು. "ಇಡೀ ದೇಶದಲ್ಲಿ ಇಂತಹ ಬಂಡ ವಿಪಕ್ಷಗಳೇ ಇಲ್ಲ. ಬಿ. ನಾಗೇಂದ್ರ ಅಪರಾಧಿ ಆದ್ರೆ ಅವರನ್ನು ಕಳಿಸೋಣ, ಸದ್ಯಕ್ಕೆ ಅವರು ಆರೋಪಿ ಅಷ್ಟೇ" ಎಂದು ಶಿವಲಿಂಗೇಗೌಡರು ಆಕ್ರೋಶ ವ್ಯಕ್ತಪಡಿಸಿದರು. ಇಂತಹ ಕೆಟ್ಟ ಪರಂಪರೆ ನೋಡಿಲ್ಲ ಎಂದು ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.