ಕಾವೇರಿ ನದಿ ನೀರು ಹಂಚಿಕೆ ವಿವಾದದ ಹಿನ್ನೆಲೆಯಲ್ಲಿ ಆಗಸ್ಟ್ 13ರಂದು ಅಖಂಡ ಕರ್ನಾಟಕ ಬಂದ್ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದ ಕನ್ನಡ ಒಕ್ಕೂಟ ಕರೆ ನೀಡಿದೆ. ಅಂದು ಯಾವುದೇ ಪರೀಕ್ಷೆಗಳಿಲ್ಲದ ಕಾರಣ ಈ ದಿನಾಂಕವನ್ನು ನಿಗದಿಪಡಿಸಲಾಗಿದೆ. ಬಂದ್ಗೆ ಸಿದ್ಧತೆ ನಡೆಸಲು ಹೋರಾಟಗಾರರಿಗೆ ಹನ್ನೆರಡು ದಿನಗಳ ಕಾಲಾವಕಾಶ ಲಭ್ಯವಾಗಲಿದೆ.